ಬೆಳಗಾವಿ: ಏಪ್ರಿಲ್ 18ರಂದು ಹುಬ್ಬಳ್ಳಿಯಲ್ಲಿ ಕಾಲೇಜ್ ಕ್ಯಾಂಪಸ್‌ನಲ್ಲಿ ಹತ್ಯೆಗೀಡಾದ ನೇಹಾ ಹಿರೇಮಠ್ ತಂದೆ ನಿರಂಜನ್ ಹಿರೇಮಠ್ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ನಮಗೆ ನೈತಿಕ ಬೆಂಬಲ ಸೂಚಿಸಿದ್ದವರು. ಹೀಗಾಗಿ ಕಣದಲ್ಲಿರುವ ಮೃಣಾಲ್ ಹೆಬ್ಬಾಳ್ಕರ್‌ಗೆ ಈ ಕ್ಷೇತ್ರದ ಜನರು ಬೆಂಬಲಿಸಬೇಕು ಎಂದು ಮತಯಾಚನೆ ಮಾಡಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ಬಳಿಕ ನೇಹಾ ಹಿರೇಮಠ್ ತಂದೆ ನಿರಂಜನ್ ಹಿರೇಮಠ್ ದಂಪತಿ ಬೆಳಗಾವಿಯ ಕುವೆಂಪು ನಗರದಲ್ಲಿರುವ ಸಚಿವರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಘಟನೆ ಬಳಿಕ ನಮ್ಮ ಕುಟುಂಬಕ್ಕೆ ಧೈರ್ಯ ತುಂಬಿದರು. ಘಟನೆ ಬಗ್ಗೆ ಪಕ್ಷಾತೀತ, ಧರ್ಮಾತೀತವಾಗಿ ಖಂಡನೆ ವ್ಯಕ್ತಪಡಿಸಿದವು. ನಮಗೆ ನೈತಿಕ ಬೆಂಬಲ ನೀಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇವೆ. ವಿಧಾನಸೌಧದಲ್ಲಿ ಧ್ವನಿ ಎತ್ತುವುದಾಗಿಯೂ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣ ಸಂಬಂಧವಾಗಿಯೂ ಮಾತನಾಡಿದ ಅವರು,ಪ್ರಜ್ವಲ್‌ನನ್ನು ತುಂಡರಿಸಿ ಭಾಗಗಳನ್ನು ಅನ್ಯಾಯಕ್ಕೆ ಒಳಗಾದ ಮಹಿಳೆಯರಿಗೆ ಹಂಚಬೇಕು. ಹಣದ ಪ್ರಭಾವದಿಂದ ಮಹಿಳೆ ಮೇಲೆ ಈ ರೀತಿ ದೌರ್ಜನ್ಯ ನಡೆಯುತ್ತಿವೆ. ಯಾರೇ ಮಹಿಳೆ ಮೇಲೆ ಅನ್ಯಾಯವಾದರೂ ಎಲ್ಲರೂ ಧ್ವನಿ ಎತ್ತಬೇಕು ಎಂದು ಹೇಳಿದರು.