March 10, 2021

ಅತ್ಯಾಚಾರ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಯುತ್ತಿದ್ದಾಗಲೇ ಆಸ್ಪತ್ರೆಯ ಹೊರಗಡೆ ತಂದೆ ಅಪಘಾತಕ್ಕೆ ಬಲಿ !

ಪ್ರಕರಣದ ಪ್ರಮುಖ ಆರೋಪಿಯ ತಂದೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ !

ಉತ್ತರಪ್ರದೇಶ : ಸಾಮೂಹಿಕ ಅತ್ಯಾಚಾರ ನಡೆದು ಎಫ್.ಐ.ಆರ್ ದಾಖಲಿಸಿದ ಮರುದಿನವೇ ಅತ್ಯಾಚಾರ ಸಂತ್ರಸ್ಥೆಯ ತಂದೆ ಅಫಘಾತದಲ್ಲಿ ಮೃತಪಟ್ಟ ಘಟನೆ ಕಾನ್ಪುರದಲ್ಲಿ ನಡೆದಿದೆ.

13 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ನಡೆದು ಪ್ರಕರಣ ದಾಖಲಾಗಿ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ತೆಗೆದುಕೊಂಡು ಹೋಗಲಾಗಿತ್ತು. ಇದೀಗ ಅದೇ ಆಸ್ಪತ್ರೆಯ ಎದುರು ತಂದೆಯ ಅಫಘಾತ ನಡೆದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಪ್ರಧಾನ ಆರೋಪಿ ಗೋಲು ಯಾದವ್ ತಂದೆ ಕಾನ್ಪುರದಿಂದ ನೂರು ಕಿ.ಮಿ ದೂರವಿರುವ ಕನೌಜದಲ್ಲಿ ಸಬ್ – ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅತ್ಯಾಚಾರವೆಸಗಿದ ದಿನದಿಂದಲೂ ಆತ ಬಾಲಕಿಯ ಕುಟುಂಬದವರಿಗೆ ಬೆದರಿಕೆಯೊಡ್ಡುತ್ತಿದ್ದ ಎನ್ನಲಾಗಿದೆ. ಇದೀಗ ಸಂತ್ರಸ್ಥೆಯ ತಂದೆಯನ್ನು ಹತ್ಯೆ ಮಾಡಲಾಗಿದೆಯೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮಗಳ ವೈದ್ಯಕೀಯ ಪರೀಕ್ಷೆ ನಡೆಯುತ್ತಿರುವಾಗ ಸಂತ್ರಸ್ಥೆಯ ತಂದೆ ಚಾ ಕುಡಿಯಲು ಹೊರಗೆ ಬಂದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದರಿಂದ ಮಹಿಳೆಯರು ಆತಂಕದಲ್ಲಿ ಬದುಕುವಂತಹ ವಾತಾವರಣ ನಿರ್ಮಾಣವಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!