Home ಟಾಪ್ ಸುದ್ದಿಗಳು ಮಗಳನ್ನು ಸಾಕಲು ಕಷ್ಟವಾಗುತ್ತದೆ ಎಂದು ಕತ್ತು ಹಿಸುಕಿ ಕೊಂದ ತಂದೆಗೆ ಜೀವಾವಧಿ ಶಿಕ್ಷೆ

ಮಗಳನ್ನು ಸಾಕಲು ಕಷ್ಟವಾಗುತ್ತದೆ ಎಂದು ಕತ್ತು ಹಿಸುಕಿ ಕೊಂದ ತಂದೆಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಸಾಕಲು ಕಷ್ಟವಾಗುತ್ತೆ . ಅವಳಿಗೆ ವಿದ್ಯಾಭ್ಯಾಸ ಕೊಡಿಸಲು ಸಾಧ್ಯವಾಗುದಿಲ್ಲ ಎಂದು ತಂದೆಯೊಬ್ಬ ತನ್ನ ಹೆತ್ತ ಮಗಳನ್ನೇ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡದ ಮಂಗಸೂಳಿ ಮಲ್ಲಾರವಾಡಿ ಎಂಬಲ್ಲಿ‌ ನಡೆದಿದೆ. ಹೀಗೆ ಬರ್ಬರವಾಗಿ ಹತ್ಯೆ ಮಾಡಿದ ತಂದೆಗೆ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಗಳವಾರ ತೀರ್ಪು ಹೊರಡಿಸಿದೆ.

ಬಸವರಾಜ ಈರಪ್ಪ ಮಗದುಮ್ಮ(35) ಎಂಬಾತ ಜೀವಾವಧಿ ಶಿಕ್ಷೆಗೊಳಗಾದ ತಂದೆ. ಬಸವರಾಜ ಮಗದುಮ್ಮ ತನ್ನ ಮಗಳಾದ ಸಂಗೀತಾ ಬಸವರಾಜ ಮಗದುಮ್ಮ(7)ಳನ್ನು 2016ರ ಸೆಪ್ಟೆಂಬರ್ 6 ರಂದು ಅಪ್ಪಾಸಾಹೇಬ್ ಶಿಂಧೆ ಅವರ ಛಾವಣಿ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು ಕತ್ತು ಹಿಸುಕಿ ಕೊಲೆ ಮಾಡಿದ್ದನು.

ಈ ಕುರಿತು ಅಥಣಿ ಸಿಪಿಐ ಎಸ್.ಎಚ್.ಶೇಖರಪ್ಪ ದೂರುಪತ್ರ ಸಲ್ಲಿಸಿದ್ದರು. ಪ್ರಕರಣದ ತನಿಖೆ ನಡೆಸಿದ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ಎಲ್.ಚೌವ್ಹಾಣ ಅವರು ಆರೋಪಿ ಬಸವರಾಜ ಮಗದುಮ್ಮಗೆ ಜೀವಾವಧಿ ಶಿಕ್ಷೆ ನೀಡಿ ಎಂದು ತೀರ್ಪು ನೀಡಿದ್ದಾರೆ.

Join Whatsapp
Exit mobile version