ಬೆಂಗಳೂರು | ರಸ್ತೆಯಲ್ಲೇ ಮಗನಿಗೆ ಬೆಂಕಿ ಹಚ್ಚಿ ಕೊಂದ ತಂದೆ

Prasthutha|

►► ಮನಕಲಕುವ ದೃಶ್ಯ ಕ್ಯಾಮೆರಾದಲ್ಲಿ ಸೆರೆ

- Advertisement -

ಬೆಂಗಳೂರು: ಮಗನಿಂದಾಗಿ 12 ಸಾವಿರ ರೂಪಾಯಿ ಕಳಕೊಂಡ ಸಿಟ್ಟಿಗೆ ತಂದೆಯೇ ಮಗನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ಬೆಂಗಳೂರಿನ ಆಜಾದ್ ನಗರದ ಮುಖ್ಯರಸ್ತೆಯಲ್ಲಿ ನಡೆದಿದೆ. ಮೃತ ಮಗನನ್ನು ಅರ್ಪಿತ್ ಎಂದು ಗುರುತಿಸಲಾಗಿದೆ.

ಆಜಾದ್ ನಗರದ ನಿವಾಸಿ ಸುರೇಂದ್ರ ತನ್ನ ಮಗನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಸಿ ಕೊಂದಿರುವ ಮನಕಲಕುವ ದೃಶ್ಯವು ಸಿಸಿಟಿವಿ ಯಲ್ಲಿ ಸೆರೆಯಾಗಿದೆ.

- Advertisement -

ಮೃತ ಅರ್ಪಿತ್ 12 ಸಾವಿರ ರೂ. ಕಳೆದುಕೊಂಡಿದ್ದಕ್ಕೆ ಸುರೇಂದ್ರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬೆಂಕಿ ಹಚ್ಚಿಕೊಂಡ ನಂತರ ಜೀವ ಉಳಿಸಿಕೊಳ್ಳಲು ಅರ್ಪಿತ್ ಸ್ಥಳದಿಂದ ಓಡಿ ಹೋಗುವ ದೃಶ್ಯ ಸೆರೆಯಾಗಿದೆ. ಇದರಿಂದ ದೇಹದ ಬಹುಪಾಲು ಭಾಗ ಸುಟ್ಟುಹೋಗಿತ್ತು ಎನ್ನಲಾಗಿದೆ. ಅರ್ಪಿತ್‌ನನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಅರ್ಪಿತ್ ಸಾವನ್ನಪ್ಪಿದ್ದಾನೆ.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

Join Whatsapp