ಹಬ್ಬಕ್ಕೆ ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ- ಮಗ ಮೃತ್ಯು

Prasthutha|

ದೊಡ್ಡಬಳ್ಳಾಪುರ: ಹಬ್ಬಕ್ಕೆ ತಾವರೆ ಹೂ ಕೀಳಲೆಂದು ಕೆರೆಗೆ ಇಳಿದ ತಂದೆ ಮಗ ಇಬ್ಬರೂ ಮುಳುಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿ ಗ್ರಾಮದ ಕೆರೆಯಲ್ಲಿ ನಡೆದಿದೆ.

- Advertisement -


ತಂದೆ ಪುಟ್ಟರಾಜು (42) ಹಾಗೂ ಮಗ ಕೇಶವ (14) ಮೃತಪಟ್ಟವರು.


ಮೃತರು ದೊಡ್ಡಬಳ್ಳಾಪುರ ಶಾಂತಿನಗರದ ನಿವಾಸಿಗಳು. ಇಂದು ಹಬ್ಬಕ್ಕಾಗಿ ಮಾರಾಟ ಮಾಡಲು ನಿನ್ನೆ ಸಂಜೆ ಭೂಚನಹಳ್ಳಿ ಬಳಿಯ ಕೆರೆಗೆ ತಾವರೆ ಹೂ ಕೀಳಲು ತಂದೆ ಮಗ ಹೋಗಿದ್ದರು. ಕೆರೆಯ ದಡದಲ್ಲಿ ಮೊಬೈಲ್, ಚಪ್ಪಲಿ ಬಿಟ್ಟು ತಾವರೆ ಹೂ ಕೀಳಲು ಮುಂದಾದ ವೇಳೆ ಅವಘಡ ನಡೆದಿದೆ. ಆಳ ತಿಳಿಯದೆ ಮುಂದೆ ಹೋದುದರಿಂದ ಕೆಸರಿನಲ್ಲಿ ಸಿಲುಕಿಕೊಂಡು ಮೃತಪಟ್ಟಿರಬೇಕು ಎಂದು ಶಂಕಿಸಲಾಗಿದೆ.



Join Whatsapp