ಸುರತ್ಕಲ್ ಫಾಝಿಲ್ ಹತ್ಯೆ: ಆರೋಪಿಗಳಿಗೆ ಆಶ್ರಯ ನೀಡಿದ್ದ ಮತ್ತೋರ್ವ ಬಜರಂಗದಳದ ಕಾರ್ಯಕರ್ತನ ಬಂಧನ

Prasthutha|


ಮಂಗಳೂರು: ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಬಳಿಕ ಹಂತಕರನ್ನು ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅವರಿಗೆ ಉಳಿದುಕೊಳ್ಳಲು ಆಶ್ರಯ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿಯನ್ನು ಬಂಟ್ವಾಳ ನಿವಾಸಿ ಹರ್ಷಿತ್(28) ಎಂದು ಗುರುತಿಸಲಾಗಿದೆ.

ಸುಹಾಸ್ ಶೆಟ್ಟಿ, ಮೊಹನ್, ಗಿರಿಧರ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್ ಎಂಬ ಬಜರಂಗದಳದ ಕಾರ್ಯಕರ್ತರು ಫಾಝಿಲ್ ರನ್ನು ಹತ್ಯೆ ಮಾಡಿದ ಬಳಿಕ ಹರ್ಷಿತ್ , ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅವರಿಗೆ ಉಳಿದುಕೊಳ್ಳಲು ಆಶ್ರಯ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಜುಲೈ 28 ರಂದು ಸಂಜೆ ಸುರತ್ಕಲ್ ನಲ್ಲಿ ಕಾರಿನಲ್ಲಿ ಬಂದ ಬಜರಂಗದಳ ಕಾರ್ಯಕರ್ತರು ಫಾಝಿಲ್ ಹತ್ಯೆ ನಡೆಸಿ ಪರಾರಿಯಾಗಿದ್ದರು. ಪ್ರಸಕ್ತ 7 ಮಂದಿ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಹರ್ಷಿತ್ ಬಂಧನದೊಂದಿಗೆ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿದೆ.



Join Whatsapp