ಉಡುಪಿ: ಫಾಝಿಲ್ ಹತ್ಯೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿರುವ ಆರ್ ಎಸ್ ಎಸ್ ಕಾರ್ಯಕರ್ತ ಲಕ್ಷ್ಮೀಕಾಂತ ಬೈಂದೂರು ವಿರುದ್ಧ ಪ್ರಕರಣ ದಾಖಲಾಗಿದೆ.
ಲಕ್ಷ್ಮೀಕಾಂತ ಬೈಂದೂರು ಎಂಬ ಆರ್ ಎಸ್ ಎಸ್ ಕಾರ್ಯಕರ್ತ ತನ್ನ ಫೇಸ್ ಬುಕ್ ನಲ್ಲಿ ಫಾಝಿಲ್ ಹಂತಕರು ಹೀರೋಗಳು ಎಂದು ಶೀರ್ಷಿಕೆ ನೀಡಿ ಪೋಸ್ಟ್ ಮಾಡಿದ್ದಾನೆ. ಈತ ಕೋಮು ಪ್ರಚೋದನೆ ಪೋಸ್ಟ್ ನ್ನು ಹರಿಯಬಿಟ್ಟಿರುವುದು ಕಂಡುಬಂದಿದ್ದು, ಈತನ ವಿರುದ್ಧ ಸೆನ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರಿನ ಅನ್ವಯ ಸೆನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.