Home ಟಾಪ್ ಸುದ್ದಿಗಳು ಫೆ. 2ರಿಂದ ಹಂಪಿ ಉತ್ಸವ: ಸಚಿವ ಝಮೀರ್ ಅಹ್ಮದ್

ಫೆ. 2ರಿಂದ ಹಂಪಿ ಉತ್ಸವ: ಸಚಿವ ಝಮೀರ್ ಅಹ್ಮದ್

ಹೊಸಪೇಟೆ: ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರುವರಿ 2ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 2ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಒಪ್ಪಿಗೆ ನೀಡಿದ್ದು, ಮೊದಲ ದಿನ ಉತ್ಸವ ಉದ್ಘಾಟನೆ ಮಾಡಲಿದ್ದಾರೆ. ಈ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಸೂಚಿಸಲಾಗಿದೆ ಎಂದು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version