ಫೆ. 10 ರಂದು ನೂತನ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಲಪಾಡ್ ಅಧಿಕಾರ ಸ್ವೀಕಾರ

Prasthutha|

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ನಡೆಯುತ್ತಿದ್ದ ಜಟಾಪಟಿಗೆ ಬ್ರೇಕ್ ಬಿದ್ದಿದ್ದು, ಫೆಬ್ರವರಿ 10 ರಂದು ಮುಹಮ್ಮದ್ ನಲಪಾಡ್ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

- Advertisement -

ಚುನಾವಣೆಯಲ್ಲಿ ನಲಪಾಡ್ ಅತ್ಯಧಿಕ ಮತಗಳನ್ನು ಪಡೆದರೂ ಅವರ ಅಪರಾಧ ಹಿನ್ನೆಲೆಯ ಕಾರಣದಿಂದ ಅಧ್ಯಕ್ಷ ಸ್ಥಾನವನ್ನು ನೀಡಲಾಗಿರಲಿಲ್ಲ. ಇದು ಯುವ ಕಾಂಗ್ರೆಸ್ ನಲ್ಲಿ ಬಿಕ್ಕಟ್ಟು ಸೃಷ್ಟಿಗೆ ಕಾರಣವಾಗಿತ್ತು.

ಫೆ. 10 ರಂದು ಸರ್ವಧರ್ಮ ಪ್ರಾರ್ಥನೆಯ ಮೂಲಕ ರಾಜ್ಯ ಯುವ ಕಾಂಗ್ರೆಸ್ ಭವನದಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ನಲಪಾಡ್ ತಿಳಿಸಿದ್ದಾರೆ.  

Join Whatsapp
Exit mobile version