Home ಟಾಪ್ ಸುದ್ದಿಗಳು ರಾಜ್ಯ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ: ಫೆ. 14ರಂದು ವಿಧಾನಸೌಧಕ್ಕೆ ರೈತರ ಮುತ್ತಿಗೆ

ರಾಜ್ಯ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ: ಫೆ. 14ರಂದು ವಿಧಾನಸೌಧಕ್ಕೆ ರೈತರ ಮುತ್ತಿಗೆ

ಹೊಸಪೇಟೆ: ರಾಜ್ಯ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಫೆ. 14ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಜೆ. ಕಾರ್ತಿಕ್ ಹೇಳಿದ್ದಾರೆ .

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಒಂದು ವರ್ಷಕ್ಕೂ ಹೆಚ್ಚಿನ ಕಾಲ ರೈತರು ಪ್ರತಿಭಟನೆ ನಡೆಸಿ, ಸತತ ಒತ್ತಡ ಹೇರಿದ್ದರಿಂದ ಪ್ರಧಾನಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ರದ್ದುಪಡಿಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಕಾಯ್ದೆ ರದ್ದುಗೊಳಿಸಲು ಹಿಂದೇಟು ಹಾಕುತ್ತಿದೆ. ಈ ಸಂಬಂಧ ಹಲವು ಸಲ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಹೇಳಿದರು.

ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಹೋರಾಟ ನಡೆಸಿ ಒತ್ತಾಯಿಸಲಾಗಿತ್ತು. ಆದರೆ, ಸರ್ಕಾರ ಗಂಭೀರವಾಗಿಲ್ಲ. ಬಜೆಟ್ ಮಂಡನೆಯ ದಿನವೇ ಹೋರಾಟ ನಡೆಸಲಾಗುತ್ತಿದ್ದು, ರಾಜ್ಯದ ವಿವಿಧ ಭಾಗಗಳಿಂದ ನೂರಾರು ರೈತರು ಪಾಲ್ಗೊಳ್ಳುವರು ಎಂದು ವಿವರಿಸಿದರು.

Join Whatsapp
Exit mobile version