ಫೆ. 23ರಂದು SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಾವೇಶ

Prasthutha|

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಫೆಬ್ರವರಿ 23 ರಂದು ಎಸ್ ಎಸ್ ಆಡಿಟೋರಿಯಂ ಆಲಡ್ಕದಲ್ಲಿ ಪಕ್ಷದ ಸಮಾವೇಶ ನಡೆಯಲಿದೆ.

- Advertisement -

ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ ಮುಖ್ಯ ಭಾಷಣ ಮಾಡಲಿದ್ದಾರೆ. ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು, ಅಕ್ಬರ್ ಅಲಿ ಪೋನ್ನೋಡಿ, ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಸಮಿತಿ ಸದಸ್ಯರಾದ ಯೂಸುಫ್ ಆಲಡ್ಕ, ಬಶೀರ್ ಬೊಳ್ಳಾಯಿ, ವಿಮ್ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ, ವಿಮ್ ಜಿಲ್ಲಾಧ್ಯಕ್ಷೆ ನೌರಿನ್ ಆಲಂಪಾಡಿ ಹಾಗೂ ಎಸ್ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಮೂನಿಷ್ ಆಲಿ ಭಾಗವಹಿಸಲಿದ್ದಾರೆ.

ಪಕ್ಷದ ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಜೊತೆ ಕಾರ್ಯದರ್ಶಿ ಅಶ್ರಫ್ ತಲಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Join Whatsapp