Home ಕರಾವಳಿ ಫೆ. 9ಕ್ಕೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ರಿಯಾಝ್ ಫರಂಗಿಪೇಟೆ ಕೆಸಿ ರೋಡ್’ ಗೆ

ಫೆ. 9ಕ್ಕೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ರಿಯಾಝ್ ಫರಂಗಿಪೇಟೆ ಕೆಸಿ ರೋಡ್’ ಗೆ

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು,ರಾಷ್ಟೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ರವರು ಫೆಬ್ರವರಿ 9 ಶುಕ್ರವಾರ ಸಂಜೆ ಮಂಗಳೂರು ವಿಧಾನಸಭಾ ಕ್ಷೇತ್ರದ, ಕೆಸಿ ರೋಡ್ ನಲ್ಲಿ ಪಕ್ಷದ ತಲಪಾಡಿ ಗ್ರಾಮ ಸಮಿತಿಯ ನೂತನ ಕಛೇರಿ ಉದ್ಘಾಟನೆ ಹಾಗೂ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.


ಈ ಕಾರ್ಯಕ್ರಮದಲ್ಲಿ ದಕ್ಸಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು ಭಾಗವಹಿಸಲಿದ್ದಾರೆ ಎಂದು ತಲಪಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ಇಮ್ರಾನ್ ಪೂಮನ್ನ್ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version