ರಾಜ್ಯ ಸರಕಾರದಿಂದ ಹಬ್ಬದ ಕೊಡುಗೆ: ದೀಪಾವಳಿಗೆ KSRTC 1500 ವಿಶೇಷ ಬಸ್

Prasthutha|

ಬೆಂಗಳೂರು: ರಾಜ್ಯ ಸರಕಾರವು ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಯಿಂದ 1,500 ವಿಶೇಷ ಬಸ್‌ಗಳ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಿದೆ.

- Advertisement -

ಇದೇ 21ರಿಂದ 23ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ವಿಶೇಷ ಬಸ್‌ಗಳು ಹೊರಡಲಿವೆ. 26ರಿಂದ 30ರ ವರೆಗೆ ಬೆಂಗಳೂರಿಗೆ ವಾಪಸ್ ಬರಲಿವೆ. ಮೆಜೆಸ್ಟಿಕ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿಗೆ ಬಸ್‌ಗಳು ಸಂಚಾರ ಮಾಡಲಿವೆ.

ಆಸನಗಳನ್ನು ಮುಂಗಡವಾಗಿ ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ 5ರಷ್ಟು ರಿಯಾಯಿತಿ ನೀಡಲಾಗುವುದು. ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟನ್ನು ಒಟ್ಟಿಗೆ ಕಾಯ್ದಿರಿಸಿದಾಗ ಹಿಂದಿರುಗುವ ಪ್ರಯಾಣ ದರದಲ್ಲಿ ಶೇ 10ರಷ್ಟು ರಿಯಾಯಿತಿ ಕೊಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

Join Whatsapp