ರಾಷ್ಟ್ರೀಯ ಲಾಂಛನದಲ್ಲಿ ಉಗ್ರ ಮುಖದ ಸಿಂಹ: ವ್ಯಾಪಕ ಆಕ್ರೋಶ

Prasthutha|

ಹೊಸದಿಲ್ಲಿ: ಭಾರತದ ರಾಷ್ಟ್ರೀಯ ಲಾಂಛನದಲ್ಲಿರುವ ಸಿಂಹಗಳ ಮುಖವು ಹಿಂದಿನಿಂದಲೂ ನಿರ್ಲಿಪ್ತ ಭಾವದಿಂದ ಕೂಡಿದ್ದು, ಆದರೆ ಇದೀಗ ಅದನ್ನು ಉಗ್ರರೀತಿಯಲ್ಲಿ ಬಿಂಬಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

- Advertisement -


ತೃಣಮೂಲ ಕಾಂಗ್ರೆಸ್ ಸಂಸದರಾದ ಜವಾಹರ್ ಸಿರ್ಕಾರ್ ಮತ್ತು ಮಹುವಾ ಮೊಯಿತ್ರಾ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನದ ಮೇಲೆ ಅನಾವರಣಗೊಳಿಸಿದ ರಾಷ್ಟ್ರೀಯ ಲಾಂಛನದಲ್ಲಿ ಸಿಂಹಗಳನ್ನು ಆಕ್ರಮಣಕಾರಿ ರೀತಿಯಲ್ಲಿ ಬಿಂಬಿಸಲಾಗಿದೆ ಹಾಗೂ ಮೂಲ ಲಾಂಛನಕ್ಕಿಂತ ಬಹಳ ಭಿನ್ನವಾಗಿದೆ ಎಂದು ಟೀಕಿಸಿದ್ದಾರೆ.


ಅಲ್ಲದೆ ಹಲವಾರು ಮಂದಿ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಲಾಂಛನವನ್ನು ಸರಿಪಡಿಸಿ ಬದಲಾಯಿಸಬೇಕೆಂದು ಮನವಿ ಮಾಡಿದ್ದಾರೆ.

Join Whatsapp