ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್’ಗಾಗಿ ಹೊಡೆದಾಟ: ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ

Prasthutha|

ಮೈಸೂರು: ತಿರುಪತಿ ಬಳಿ ಚಲಿಸುತ್ತಿದ್ದ ರೈಲಿನಲ್ಲಿ ಸೀಟ್ ವಿಚಾರಕ್ಕೆ ರಾಜ್ಯದ 38 ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮೈಸೂರು ಮೂಲದ 35 ಜನರು ಆಂಧ್ರದ ತಿರುಪತಿಗೆ ತೆರಳಿದ್ದರು. ತಿರುಪತಿಯಿಂದ ವಾಪಸ್ ರೈಲಿನಲ್ಲಿ ಬರುವಾಗ ಸೀಟ್ ವಿಚಾರಕ್ಕೆ ಗಲಾಟೆಯಾಗಿದ್ದು ರಾಜ್ಯದ ಪ್ರಯಾಣಿಕರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

- Advertisement -

ನೂರಾರು ಜನರನ್ನು ಕರೆಸಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ದೂರು ನೀಡಿದ್ದರೂ ಆಂಧ್ರದ ಪಾಕಲಂ ಪೊಲೀಸರು ಸ್ಪಂದಿಸಿಲ್ಲ. ಮೊಬೈಲ್ನಲ್ಲಿ ಸೆರೆಯಾದ ಹಲ್ಲೆ ದೃಶ್ಯ ಡಿಲೀಟ್ ಮಾಡಿಸಿದರು ಎಂದು ಪ್ರಯಾಣಿಕರೊಬ್ಬರು ಆರೋಪಿಸಿದ್ದಾರೆ. ಹೀಗಾಗಿ ಹಲ್ಲೆಗೊಳಗಾದವರು ಈ ಬಗ್ಗೆ ಮೈಸೂರಿನಲ್ಲಿ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

Join Whatsapp