ಚಿಕ್ಕೋಡಿ: 2ಎ ಮೀಸಲಾತಿಗಾಗಿ ಸೆ.10 ರಂದು ನಿಪ್ಪಾಣಿಯಲ್ಲಿ ಮತ್ತೆ ಹೋರಾಟ ಆರಂಭವಾಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಚಿಕ್ಕೋಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ನೇರವೇರಿಸಿ ಹೋರಾಟ ಆರಂಭ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.
ಸೆ.10 ರಂದು ನಿಪ್ಪಾಣಿಯಲ್ಲಿ ಬಹಿರಂಗ ಸಭೆ ನಡೆಸಲಾಗುವುದು. ಬಳಿಕ ರಾಷ್ಟ್ರೀಯ ಹೆದ್ದಾರಿಗೆ ಪಾದಯಾತ್ರೆ ಮೂಲಕ ತೆರಳಿ ಇಷ್ಟಲಿಂಗ ಪೂಜೆ ಮಾಡಲಾಗುವುದು. ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಸಿಗಬೇಕು. ಕೇಂದ್ರ ಸರ್ಕಾರವು ಒಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ಒತ್ತಾಯ ಮಾಡಲಾಗುತ್ತದೆ. ಸೆ.10 ರಂದು ವೀರಶೈವ ಲಿಂಗಾಯತ ಸಮುದಾಯವರು ಹೋರಾಟದಲ್ಲಿ ಪಾಲ್ಗೊಳ್ಳಬೇಕೆಂದು ಸ್ವಾಮೀಜಿ ಮನವಿ ಮಾಡಿದ್ದಾರೆ.