ಕಾರವಾರ: ಉತ್ತರ ಕನ್ನಡವು ಭೌಗೋಳಿಕವಾಗಿ ಬಹು ವಿಸ್ತಾರವಾಗಿರುವ ಜಿಲ್ಲೆಯಾದರೂ ಇಲ್ಲಿ ಒಂದೇ ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ಉಡುಪಿಯಲ್ಲಿ ಆ್ಯಂಬುಲೆನ್ಸ್ ಪಲ್ಟಿ ಬಳಿಕ ಜಿಲ್ಲೆಯ ಜನರು ಅಗಸ್ಟ್ 1ರಿಂದ ರಕ್ತದಲ್ಲಿ ಪತ್ರ ಬರೆಯುವ ಅಭಿಯಾನವನ್ನು ಆರಂಭಿಸಲಿದ್ದಾರೆ.
ಭೌಗೋಳಿಕವಾಗಿ ಬಹು ವಿಸ್ತಾರವಾಗಿರುವ ಜಿಲ್ಲೆಯಲ್ಲಿ ಒಂದೇ ಒಂದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ಇದೇ ಕಾರಣಕ್ಕೆ ತುರ್ತು ಸಂದರ್ಭದಲ್ಲಿ ಚಿಕಿತ್ಸೆಗಾಗಿ ದೂರದ ಉಡುಪಿ, ಮಂಗಳೂರಿಗೆ ಹೋಗುವ ಪರಿಸ್ಥಿತಿ ಬಂದಿದೆ. ಕಳೆದ ಜುಲೈ 20 ರಂದು ಸಂಭವಿಸಿದ ಆಂಬುಲೆನ್ಸ್ ಅಪಘಾತದಲ್ಲಿ ಹೊನ್ನಾವರದ ನಾಲ್ವರು ಸಾವನ್ನಪ್ಪಿದ್ದರು. ಈ ಘಟನೆಯ ನಂತರ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ಬೇಕು ಎನ್ನುವ ಕೂಗು ಪ್ರಬಲವಾಗಿತ್ತು. ಇದೀಗ ಹೋರಾಟ ಸಂಘಟಿತ ರೂಪ ಪಡೆದುಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಮಲ್ಪಿ ಸ್ಪಷಾಲಿಟಿ ಆಸ್ಪತ್ರೆ ಸ್ಥಾಪನೆಯಾಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಜನರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಾದ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡು, ಹಳಿಯಾಳಗಳಿಗೆ ಸೇರಿದಂತೆ ಒಂದು ಆಸ್ಪತ್ರೆ. ಘಟ್ಟದ ಕೆಳಗಿನ ತಾಲೂಕುಗಳಾದ ಕುಮಟ, ಹೊನ್ನಾವರ, ಅಂಕೋಲ, ಭಟ್ಕಳ, ಕಾರವಾರ, ಜೋಯಿಡಾಕ್ಕೆ ಸೇರಿದಂತೆ ಮತ್ತೊಂದು ಆಸ್ಪತ್ರೆ ಸ್ಥಾಪಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.