Home ಟಾಪ್ ಸುದ್ದಿಗಳು ಝಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿ: ಎಜಿಗೆ ಟಿ ಜೆ ಅಬ್ರಹಾಂ ದೂರು

ಝಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿ: ಎಜಿಗೆ ಟಿ ಜೆ ಅಬ್ರಹಾಂ ದೂರು

ಬೆಂಗಳೂರು: ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್ ಮೆಂಟ್ ಎಂದಿದ್ದ ಸಚಿವ ಝಮೀರ್ ಅಹ್ಮದ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ದೂರು ನೀಡಿದ್ದಾರೆ.


ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ ಮೆಂಟ್‌ ಎಂದು ಕರೆದಿದ್ದಾರೆ. ಹೀಗಾಗಿ ಜಮೀರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವಂತೆ ಅಡ್ವೋಕೆಟ್ ಜನರಲ್ ಶಶಿಕಿರಣ್ ಶೆಟ್ಟಿಗೆ ಟಿ ಜೆ ಅಬ್ರಹಾಂ ದೂರು ಕೊಟ್ಟಿದ್ದಾರೆ.


ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿತ್ತು. ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿತ್ತು.

Join Whatsapp
Exit mobile version