ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

Prasthutha|

ಬೆಂಗಳೂರು: ವೈಯಕ್ತಿಕ ಕಾರಣದ ಹಲ್ಲೆ ಪ್ರಕರಣಕ್ಕೆ ಕೋಮು ಬಣ್ಣ ಬಳಿದು ಬುಧವಾರ ನಗರತಪೇಟೆಯಲ್ಲಿ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆಂದು ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಚಿಕ್ಕಪೇಟೆ ನಿವಾಸಿ ಸಾವಿತ್ರಿಹಳ್ಳಿ ಎಂಬುವವರು ಬುಧವಾರ ನಡೆದ ಪ್ರತಿಭಟನೆಯಲ್ಲಿ ಸಂಸದ ಮತೀಯ ಭಾವನೆಗಳನ್ನು ಕೆರಳಿಸುವಂತಹ ಹೇಳಿಕೆ ನೀಡಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗದ ಸೂಚನೆ ಮೇರೆಗೆ ಠಾಣೆಯಲ್ಲಿ ಐಪಿಸಿ153(a), 295 (a) & ಸೆಕ್ಷನ್ 123 (3a) ಜನಪ್ರತಿನಿಧಿಗಳ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೆಪಿಸಿಸಿಯ ಸೂರ್ಯ ಮುಕುಂದ ರಾಜ್ ಎಂಬವರು ಕೂಡ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಿಸಿದ್ದರು. ಈ ರೀತಿ ಪ್ರತಿಭಟನೆ ಮಾಡುವ ಮೂಲಕ ಕೋಮು ವಿವಾದಕ್ಕೆ ಪ್ರಚೋದನೆ ನೀಡಲಾಗುತ್ತಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು.



Join Whatsapp