ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
2019ರಲ್ಲಿ ನಡೆದಿದ್ದ ದಾಳಿ ಸಂಬಂಧ ಇಡಿ ಅಧಿಕಾರಿಗಳು ದೆಹಲಿಯ ವಿಶೇಷ ಕೋರ್ಟ್ ಗೆ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.
2019ರಲ್ಲಿ ಇಡಿ ಅಧಿಕಾರಿಗಳು ಶಿವಕುಮಾರ್ ಮತ್ತು ಅವರ ಆಪ್ತರ ನಿವಾಸಗಳ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಬರೋಬ್ಬರಿ 8 ಕೋಟಿ ರೂ. ಹಣ ಪತ್ತೆಯಾಗಿತ್ತು ಎನ್ನಲಾಗಿದೆ. ಬಳಿಕ ಈ ಪ್ರಕರಣ ಇಡಿಗೆ ವರ್ಗಾವಣೆಗೊಂಡಿತ್ತು. ಜೊತೆಗೆ ಜಾರಿ ನಿರ್ದೇಶನಾಲಯ ಡಿಕೆಶಿಯನ್ನು ಬಂಧಿಸಿ ವಿಚಾರಣೆ ನಡೆಸಿತ್ತು.