ಮೋದಿ ಸರ್ಕಾರದ ಚುನಾವಣಾ ಆಫರ್ ಮುಗಿದಿದೆ, ಶೀಘ್ರ ಪೆಟ್ರೋಲ್ ಟ್ಯಾಂಕ್ ಭರ್ತಿ ಮಾಡಿ: ರಾಹುಲ್ ಗಾಂಧಿ

Prasthutha|

ದೆಹಲಿ: ಮೋದಿ ಸರ್ಕಾರದ ಚುನಾವಣಾ ಆಫರ್ ಬೇಗ ಮುಗಿಯಲಿದ್ದು, ದೇಶದ ಜನರು ಆದಷ್ಟು ಶೀಘ್ರವಾಗಿ ಪೆಟ್ರೋಲ್ ಅನ್ನು ತುಂಬಿಸಿಟ್ಟುಕೊಳ್ಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ಈ ಬಗ್ಗೆ ಟ್ವಿಟರ್ ನಲ್ಲಿ ವ್ಯಂಗ್ಯವಾಗಿ ಬರೆದುಕೊಂಡಿರುವ ಅವರು, “ನರೇಂದ್ರ ಮೋದಿ‌ ಸರ್ಕಾರ ನೀಡಿದ್ದ ಎಲೆಕ್ಷನ್ ಆಫರ್ ಸದ್ಯದಲ್ಲೇ ಕೊನೆಯಾಗಲಿದೆ. ಆದಷ್ಟು ಶೀಘ್ರವಾಗಿ ಪೆಟ್ರೋಲ್ ಟ್ಯಾಂಕ್ ಗಳನ್ನು ಭರ್ತಿ ಮಾಡಿಸಿಕೊಳ್ಳಿ” ಎಂದು ಹೇಳಿದ್ದಾರೆ.

ಇದರೊಂದಿಗೆ ‘ಹೈಕ್- ಕೆಲವೇ ದಿನಗಳಲ್ಲಿ ನಿಮ್ಮ ಸಮೀಪದ ಪೆಟ್ರೋಲ್ ಬಂಕ್ ಗಳಲ್ಲಿ’ ಎಂದು ಬರೆದಿರುವ ಚಿತ್ರವೊಂದನ್ನು ಅವರು ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಈ ಹಿಂದೆ ಕೂಡ ಪೆಟ್ರೋಲ್ ಬೆಲೆ ಇಳಿಸಿದ್ದು ಚುನಾವಣಾ ತಂತ್ರ ಎಂದು ಆರೋಪಿಸಿತ್ತು. ಅಲ್ಲದೇ ಮತದಾರರನ್ನು ಒಲಿಸಲು ಈ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂದು ಟೀಕಿಸಲಾಗಿತ್ತು.

Join Whatsapp