ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ: ಸಚಿವ ಬಿ.ಸಿ.ಪಾಟೀಲ್

Prasthutha|

ಬೆಂಗಳೂರು: ರಾಜ್ಯದ ನಾಲ್ಕು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ವಿಧಾನಪರಿಷತ್ ಗಿಂದು ತಿಳಿಸಿದ್ದಾರೆ.

- Advertisement -

ಪ್ರಶ್ನೋತ್ತರ ಅವಧಿಯಲ್ಲಿ ಎಸ್.ವಿ. ಸುಂಕನೂರ ವಿಷಯ ಪ್ರಸ್ತಾಪಿಸಿ, ರಾಯಚೂರು ಹೊರತುಪಡಿಸಿ, ಶಿವಮೊಗ್ಗ, ಬೆಂಗಳೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಶೇಕಡ 60ಕ್ಕಿಂತ ಹೆಚ್ಚಿನ ಬೋಧಕ ಹುದ್ದೆಗಳು ಖಾಲಿ ಇವೆ. ಇದರಿಂದ ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳಿಗೆ ಅಡಚಣೆಯಾಗುತ್ತಿದೆ ಎಂದು ಗಮನ ಸೆಳೆದರು.

ಸಚಿವರು ಉತ್ತರ ಮುಂದುವರಿಸಿ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಒಂದು ಸಾವಿರದ 31 ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ 671 ಹಾಗೂ ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ 341, ಶಿವಮೊಗ್ಗ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 403 ಖಾಲಿ ಹುದ್ದೆ ಸೇರಿದಂತೆ ಒಟ್ಟು 2 ಸಾವಿರದ 33 ಹುದ್ದೆಗಳು ಖಾಲಿ ಇದ್ದು, ಅವುಗಳ ನೇಮಕಾತಿಗೆ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚೆ ಮಾಡಲಾಗಿದೆ.

- Advertisement -

ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಪೈಕಿ, ಶೇಕಡ 50ರಷ್ಟನ್ನು ಭರ್ತಿಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಪಾಟೀಲ್ ಹೇಳಿದರು.



Join Whatsapp