ಮುಂಬೈ: ಸಿಂಗಂ ತರಹದ ಸಿನಿಮಾಗಳು ಸಮಾಜಕ್ಕೆ ಕೆಟ್ಟ ಸಂದೇಶ ಸಾರುತ್ತವೆ ಎಂದು ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ಅಭಿಪ್ರಾಯಪಟ್ಟಿದೆ.
“ಸಿಂಗಂ”ನಂತಹ ಚಲನಚಿತ್ರಗಳಲ್ಲಿ ತೋರಿಸಿರುವಂತಹ ಕಾನೂನು ಪ್ರಕ್ರಿಯೆಯ ಬಗ್ಗೆ ತಲೆಕೆಡಿಸಿಕೊಳ್ಳದೆ ತ್ವರಿತ ನ್ಯಾಯ ಒದಗಿಸುವ “ಹೀರೋ ಪೋಲೀಸ್” ಪಾತ್ರವು ಅತ್ಯಂತ ಹಾನಿಕಾರಕ ಸಂದೇಶವನ್ನು ರವಾನಿಸುತ್ತದೆ ಎಂದು ಮುಂಬೈ ಹೈಕೊರ್ಟ್ ನ್ಯಾಯಮೂರ್ತಿ ಜಸ್ಟಿಸ್ ಗೌತಮ್ ಪಟೇಲ್ ಅಭಿಪ್ರಾಯಪಟ್ಟಿದ್ದಾರೆ.
ಇಂಡಿಯನ್ ಪೊಲೀಸ್ ಫೌಂಡೇಶನ್ ತನ್ನ ವಾರ್ಷಿಕ ದಿನ ಮತ್ತು ಪೊಲೀಸ್ ಸುಧಾರಣಾ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದ್ದಾರೆ. ಪೊಲೀಸ್ ಸುಧಾರಣೆಗಳ ಕುರಿತು ಮಾತನಾಡಿದ ಅವರು, ನಮ್ಮನ್ನು ನಾವು ಸುಧಾರಿಸಿಕೊಳ್ಳದ ಹೊರತು ಕಾನೂನು ಜಾರಿ ಯಂತ್ರವನ್ನು ಸುಧಾರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.