ದ.ಕ. ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ, ಹೆಸರು ಸೇರಿಸಲು ಕೊನೆಯ ಅವಕಾಶ: ಜಿಲ್ಲಾಧಿಕಾರಿ ಎಂ.ಆರ್. ರವಿಕುಮಾರ್

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಪ್ರಕಟಿಸಿದ್ದಾರೆ.

- Advertisement -

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 8 ವಿಧಾನ ಸಭಾ ಕ್ಷೇತ್ರಗಳ ಅರ್ಹತಾ ಮತದಾರರ  ಪಟ್ಟಿಗಳನ್ನು ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ ಹಾಗೂ ಎಲ್ಲಾ ಮತಗಟ್ಟೆಗಳಲ್ಲಿ ಸಾರ್ವಜನಿಕ ತಿಳುವಳಿಕೆಗಾಗಿ ಗುರುವಾರ ಪ್ರಕಟಿಸಲಾಗಿದೆ ಎಂದು ತಿಳಿಸಿದರು.

ದ.ಕ ಜಿಲ್ಲೆಯಲ್ಲಿ 23,57,852 ಜನಸಂಖ್ಯೆ ಇದ್ದು, ಅದರಲ್ಲಿ 17,37,688 ಮತದಾರರಿದ್ದಾರೆ. ಆ ಪೈಕಿ 8,50,552 ಪುರುಷ ಮತ್ತು 8,87,060 ಮಹಿಳಾ ಹಾಗೂ 76 ಮಂಗಳಮುಖಿಯರಿದ್ದಾರೆ ಎಂದು ಹೇಳಿದರು.

- Advertisement -

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು 2,42,186 ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ 2,01,976 ಮತದಾರರಿದ್ದಾರೆ ಎಂದರು.

47,174 ಹೊಸ ಮತದಾರರ ಸೇರ್ಪಡೆಯಾಗಿದೆ. 18,441 ಮತದಾರರನ್ನು ಪಟ್ಟಿಯಿಂದ ಕೈ ಬಿಡಲಾಗಿದೆ ಎಂದು ಹೇಳಿದರು.

ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿ, ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳನ್ನು ಭೇಟಿ ಮಾಡಿ ಮತದಾರರ ಪಟ್ಟಿಗಳಲ್ಲಿ ಹೆಸರು ನೋಂದಾಯಿಸಿರುವ ಬಗ್ಗೆ ಮತ್ತು ತಿದ್ದುಪಡಿ ಬಗ್ಗೆ ಪರಿಶೀಲಿಸಿಕೊಳ್ಳಬಹುದು. ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ ಇದ್ದಲ್ಲಿ ನಿಗದಿತ ನಮೂನೆಯಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಸಲ್ಲಿಸಲಾಗುವ ನಮೂನೆಗಳನ್ನು ನಿಯಮಾನುಸಾರ ಪರಿಶೀಲಿಸಿ ಇತ್ಯರ್ಥ ಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮತದಾರರ ಜಿಲ್ಲಾ ಸಹಾಯವಾಣಿ ಸಂಖ್ಯೆ 1950 ಕರೆ ಮಾಡಿ ಮಾಹಿತಿ ಪಡೆಯಬಹುದು.

CEO website: ceokarnataka.kar.nic.in

Disstrict website: dk.nic.in

Join Whatsapp