ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸೋಮವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್ ನಲ್ಲಿ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಹೊಟ್ಟೆಯ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.