Home ಟಾಪ್ ಸುದ್ದಿಗಳು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ: ಡಿಕೆಶಿ ಹೇಳಿದ್ದೇನು?

ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ: ಡಿಕೆಶಿ ಹೇಳಿದ್ದೇನು?

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಆರ್ಥಿಕ ಸಂಕಷ್ಟ ಎದುರಾಗಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.


ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎಂದುರಾಗಿದೆ ಎಂಬ ಬಸವರಾಜ ರಾಯರೆಡ್ಡಿ ಅವರ ಹೇಳಿಕೆ ಬಗ್ಗೆ ಅವರು ಉತ್ತರಿಸಿದರು.


ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಸಂಕಷ್ಟವಿಲ್ಲ. ನಾವು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಏನನ್ನೂ ಮುಳುಗಿಸಿಲ್ಲ. ಹೀಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ. ಕಳೆದ ವರ್ಷ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಅನ್ನು ನಾವು ಪುನರ್ ಪರಿಶೀಲಿಸಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೆವು. ಈ ಬಾರಿಯ ಬಜೆಟ್ ನಲ್ಲಿ 50 ಸಾವಿರ ಕೋಟಿಗೂ ಹೆಚ್ಚು ಹಣ ಮೀಸಲಿಟ್ಟಿದ್ದೇವೆ. ನಾವು ಮತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ. ಜನರ ಬದುಕಿನಲ್ಲಿ ಬದಲಾವಣೆ ತರಲು ಈ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬೆಲೆ ಏರಿಕೆಯಿಂದ ಜನರಿಗೆ ತೊಂದರೆಯಾಗಿತ್ತು. ಮುಂದಿನ ದಿನಗಳಲ್ಲಿ ಜನ ನಮಗೆ ಸ್ಪಂದಿಸಲಿದ್ದಾರೆ” ಎಂದು ತಿಳಿಸಿದರು.

Join Whatsapp
Exit mobile version