Home ಕರಾವಳಿ ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆ ನಿರಾಕರಿಸಿದ ಮಂಗಳೂರಿನ ಖಾಸಗಿ ಆಸ್ಪತ್ರೆ | ಪ್ರಧಾನಿ ಸಚಿವಾಲಯದಿಂದ ದಂಡ

ಆಯುಷ್ಮಾನ್ ಯೋಜನೆಯಡಿ ಚಿಕಿತ್ಸೆ ನಿರಾಕರಿಸಿದ ಮಂಗಳೂರಿನ ಖಾಸಗಿ ಆಸ್ಪತ್ರೆ | ಪ್ರಧಾನಿ ಸಚಿವಾಲಯದಿಂದ ದಂಡ

ಮಂಗಳೂರು : ಆಯುಷ್ಮಾನ್ ಯೋಜನೆಯಡಿ ಚಿಕತ್ಸೆ ನೀಡರೆ, ಬಡ ರೋಗಿಯೊಬ್ಬರಿಗೆ ಲಕ್ಷಾಂತರ ರೂ. ಬಿಲ್ ನೀಡಿರುವುದಕ್ಕೆ ಸಂಬಂಧಿಸಿದ ದೂರನ್ನಾಧರಿಸಿ, ಪ್ರಧಾನಿ ಸಚಿವಾಲಯ ಮಂಗಳೂರಿನ ಆಸ್ಪತ್ರೆಯೊಂದಕ್ಕೆ 12,96,320 ರೂ. ದಂಡ ವಿಧಿಸಿದ ಘಟನೆ ನಡೆದಿದೆ.

ಪಣಂಬೂರಿನ ವ್ಯಕ್ತಿಯೊಬ್ಬರು ಅಪಘಾತಕ್ಕೊಳಗಾಗಿ ಫೆಬ್ರವರಿ ತಿಂಗಳಿನಲ್ಲಿ ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಆಯುಷ್ಮಾನ್ ಯೋಜನೆಯಡಿ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಬೇಕಾಗಿತ್ತು. ಆದರೆ, ಚಿಕಿತ್ಸೆಗೆ ನಿರಾಕರಿಸಿದ ಬಗ್ಗೆ ಆಸ್ಪತ್ರೆ ವಿರುದ್ಧ ಪ್ರಧಾನಿ ಸಚಿವಾಲಯಕ್ಕೆ ದೂರು ನೀಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಸಚಿವಾಲಯವು ಈಗ ಆಸ್ಪತ್ರೆಗೆ ದಂಡ ವಿಧಿಸಿದೆ. ಅಲ್ಲದೆ, ಬಿಲ್ ಪಾವತಿಸಿದ ರೋಗಿಗೆ ಹಣ ಹಿಂದಿರುಗಿಸುವಂತೆ ಆದೇಶಿಸಿದೆ ಎಂದು ವರದಿಯೊಂದು ತಿಳಿಸಿದೆ.   

Join Whatsapp
Exit mobile version