ಶಿವಮೊಗ್ಗ: ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಮಾಜಿ ಸಚಿವ ಹೆಚ್.ಹಾಲಪ್ಪ ಸೇರಿದಂತೆ 43 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರದ ಜನತಾ ಶಾಲೆ ಎದುರಿನ ನಿವೇಶನಕ್ಕೆ ಸಂಬಂಧಿಸಿ ಜುಲೈ10ರಂದು ಪ್ರತಿಭಟನೆಯೊಂದು ನಡೆದಿತ್ತು. ಈ ಪ್ರತಿಭಟನೆಯ ವೇಳೆಯಲ್ಲಿ ಹಾಲಪ್ಪ ಮತ್ತು ಇತರರು ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಈ ಸಂಬಂಧವಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ಮಾಜಿ ಸಚಿವ ಹೆಚ್. ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ಬಿಜೆಪಿ ನಗರ ಅಧ್ಯಕ್ಷ ಗಣೇಶ್ ಪ್ರಸಾದ್, ನಗರ ಸಭೆ ಮಾಜಿ ಅಧ್ಯಕ್ಷೆ ಮಧುರಾ ಶಿವಾನಂದ್ ಸೇರಿದಂತೆ 43 ಮಂದಿಯ ವಿರುದ್ಧ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ. ಅದರಂತೆ ಸಾಗರ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.