Home ಟಾಪ್ ಸುದ್ದಿಗಳು CFI ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಅಡ್ಡಿ, ವಿದ್ಯಾರ್ಥಿಗಳಿಗೆ ಹಲ್ಲೆ: ಸಬ್ ಇನ್ಸ್ ಪೆಕ್ಟರ್ ಸೇರಿ 6...

CFI ಸದಸ್ಯತ್ವ ಅಭಿಯಾನ ಕಾರ್ಯಕ್ರಮಕ್ಕೆ ಅಡ್ಡಿ, ವಿದ್ಯಾರ್ಥಿಗಳಿಗೆ ಹಲ್ಲೆ: ಸಬ್ ಇನ್ಸ್ ಪೆಕ್ಟರ್ ಸೇರಿ 6 ಮಂದಿ ಪೊಲೀಸರ ವಿರುದ್ಧ FIR

ಜಮಖಂಡಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ ವಿದ್ಯಾರ್ಥಿ ನಾಯಕರಿಗೆ ಹಲ್ಲೆಗೈದ ಘಟನೆ ಸಂಬಂಧ ಜಮಖಂಡಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹಾಗೂ ಐವರು ಕಾನ್ಸ್ ಸ್ಟೆಬಲ್ ವಿರುದ್ಧ ಪ್ರಕರಣ ದಾಖಲಾಗಿದೆ.


ಜಮಖಂಡಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಐವರು ಕಾನ್ಸ್ ಸ್ಟೆಬಲ್ ವಿರುದ್ಧ ಐಪಿಸಿ 166,506,34,504,323,324 ಅನ್ವಯ ಪ್ರಕರಣ ದಾಖಲಿಸಲು ನ್ಯಾಯಾಲಯ ಸ್ಥಳೀಯ ನ್ಯಾಯಾಲಯ ಆದೇಶಿಸಿತ್ತು. ಆದರಂತೆ ಜಮಖಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕಳೆದ ವರ್ಷ ಆಗಸ್ಟ್ 17 ರಂದು ಜಮಖಂಡಿಯ ಅಂಬೇಡ್ಕರ್ ಭವನದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಸದಸ್ಯತ್ವ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಏಕಾಏಕಿ ಕಾರ್ಯಕ್ರಮ ಸ್ಥಳಕ್ಕೆ ನುಗ್ಗಿದ ಪೊಲೀಸರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ್ದರು. ಕಾರ್ಯಕ್ರಮಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ನೀಡಿದರೂ ವಿದ್ಯಾರ್ಥಿ ನಾಯಕರನ್ನು ನಿಂದಿಸಿ ಅವರ ಮೇಲೆ ಹಲ್ಲೆಗೈದಿದ್ದರು.


ಈ ಸಂಬಂಧ ವಿದ್ಯಾರ್ಥಿಗಳು ಜಮಖಂಡಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಜಮಖಂಡಿ ಪೋಲಿಸ್ ಸಬ್ ಇನ್ಸ್ ಪೆಕ್ಟರ್ , 5 ಕಾನ್ಸ್ ಸ್ಟೆಬಲ್ ವಿರುದ್ಧ ಐಪಿಸಿ 166,506,34,504,323,324 ಸೆಕ್ಷನ್ ಅನ್ವಯ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶಿಸಿದ್ದು ಅದರಂತೆ ಪ್ರಕರಣ ದಾಖಲಾಗಿದೆ.

Join Whatsapp
Exit mobile version