ವಿಜಯಪುರ: ಬಿಜೆಪಿ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಸಮರ್ಥ ಪಾಟೀಲ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ಪಾಟೀಲ್ ಅವರಿಗೆ ಟಿಕೆಟ್ ಘೋಷಣೆ ಮಾಡಿದ ದಿನ ಅವರ ಪುತ್ರ ಸಮರ್ಥ ಪಾಟೀಲ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸರು ಸಮರ್ಥ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.