Home ಟಾಪ್ ಸುದ್ದಿಗಳು ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕನ ಮೇಲೆ FIR

ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕನ ಮೇಲೆ FIR

ಮುಂಬೈ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಬಳಸಿದ್ದ ಮಹಾರಾಷ್ಟ್ರದ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ವಿರುದ್ಧ ಬಿಜೆಪಿ ಗಿಟ್ಟಿಖಾಡನ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಕೇಂದ್ರ ತನಿಖಾ ಸಂಸ್ಥೆಯು ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ನಾಗ್ಪುರದ ಇಡಿ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ಮತ್ತು ಮಾಜಿ ನಗರಾಧ್ಯಕ್ಷರು ಭಾಗವಹಿಸಿದ್ದರು.

ಈ ವೇಳೆ ಶೇಕ್ ಹುಸೇನ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ್ದಾರೆ. ಜೊತೆಗೆ ನರೇಂದ್ರ ಮೋದಿಗೂ ನಾಯಿಯ ಸಾವು ಬರುತ್ತದೆ ಎಂದು ಹೇಳಿದ್ದರು. ಈ ಸಂಬಂಧ ಹುಸೇನ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಹಾಗೂ 48 ಗಂಟೆಗಳಲ್ಲಿ ಬಂಧಿಸುವಂತೆ ಒತ್ತಾಯಿಸಿದ್ದು, ವಿಫಲವಾದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

Join Whatsapp
Exit mobile version