Home ಟಾಪ್ ಸುದ್ದಿಗಳು ‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ ಐಆರ್

‘ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಪೋಸ್ಟರ್: ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ ಐಆರ್

ಬೆಂಗಳೂರು: ಅಕ್ರಮ ವಿದ್ಯುತ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದ ಗೋಡೆಗಳಿಗೆ ವಿದ್ಯುತ್ ಕಳ್ಳ ಕುಮಾರಸ್ವಾಮಿ’ ಎಂದು ಪೋಸ್ಟರ್ ಅಂಟಿಸಿದ್ದು, ಈ ಸಂಬಂಧ ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಮೇಶ್ ಗೌಡ ದೂರು ನೀಡಿದ್ದಾರೆ.


ಈ ದೂರಿನ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತರಾದ ಬಿಂದುಗೌಡ, ನವೀನ್ ಗೌಡ ಸೇರಿದಂತೆ ಒಟ್ಟು 6 ಜನರು ವಿರುದ್ಧ ಎಫ್ ಐಆರ್ ದಾಖಲಾಗಿದೆ.


ಜೆಡಿಎಸ್ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ ಪೋಸ್ಟರ್ ಅಂಟಿಸಿದ್ದಾರೆ. ಹಾಗೂ ಇದನ್ನು ತಡೆಯಲು ಬಂದ ಸೆಕ್ಯೂರಿಟಿ ಮೇಲೆ ಕೀ ಬಂಚ್ನಿಂದ ಹಲ್ಲೆ ಮಾಡಿದ್ದಾರೆ ಎಂದು ರಮೇಶ್ ಗೌಡ ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅವಹೇಳನಕಾರಿ ಪೋಸ್ಟರ್ ಅಂಟಿಸಿ ಸೆಕ್ಯೂರಿಗೆ ಬೆದರಿಸಿದ ಆರೋಪ ಮೇರೆಗೆ ಶ್ರೀರಾಮಪುರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 448, 504, 324, 506, 149 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದಲ್ಲಿ ಬಿಂದುಗೌಡ A-5, ನವೀನ್ಗೌಡ A-6 ಆರೋಪಿಯಾಗಿದ್ದಾರೆ.

Join Whatsapp
Exit mobile version