ಕೋವಿಡ್ ನಿಯಮ ಉಲ್ಲಂಘನೆ,2500 ಮಂದಿ ವಿರುದ್ಧ ಎಫ್ ಐ ಆರ್

Prasthutha|

ಲಕ್ನೌ : ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿದ ಹಿನ್ನಲೆ, ಸಮಾಜವಾದಿ ಪಕ್ಷದ ಕಚೇರಿಯಲ್ಲಿ ಎಸ್.ಪಿಗೆ ಸೇರ್ಪಡೆಗೊಳ್ಳಲಿದ್ದ ಸುಮಾರು 2,500 ಅನಾಮಧೇಯ ವ್ಯಕ್ತಿಗಳ ವಿರುದ್ಧ ಉತ್ತರ ಪ್ರದೇಶದಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಸಚಿವರಾಗಿದ್ದ ಪ್ರಸಾದ್ ಮೌರ್ಯ, ಧರಂ ಸಿಂಗ್ ಸೈನಿ, ಐವರು ಬಿಜೆಪಿ ಶಾಸಕರು ಮತ್ತು ಅಪ್ನಾ ದಳದ ಶಾಸಕರೊಬ್ಬರು ಅಖಿಲೇಶ್ ಯಾದವ್ ಅವರ ಸಮ್ಮುಖದಲ್ಲಿ ಎಸ್ಪಿಗೆ ಸೇರ್ಪಡೆಗೊಂಡಿದ್ದರು
ದೇಶಾದ್ಯಂತ ಕೋವಿಡ್ -19 ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿರುವ 5 ರಾಜ್ಯಗಳಲ್ಲಿ ಜ. 15 ರವರೆಗೆ ಸಾರ್ವಜನಿಕ ಮೆರವಣಿಗೆ, ಬಹಿರಂಗ ಸಭೆಯನ್ನು ಚುನಾವಣಾ ಆಯೋಗ ನಿಷೇಧಿಸಿದೆ.
ಆದಾಗ್ಯೂ, ಎಸ್ಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಈ ಕಾರ್ಯಕ್ರಮದಲ್ಲಿ ಎರಡು ಸಾವಿರಕ್ಕೂಹೆಚ್ಚು ಮಂದಿ ಭಾಗವಹಿಸಿದ್ದಾರೆ. ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ

Join Whatsapp