ಬೆಳಗಾವಿ: ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಮೇಲೆ ಚಾಕು ಇರಿತ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ, ಅವರ ಇಬ್ಬರು ಆಪ್ತರು ಹಾಗೂ ಇಬ್ಬರು ಗನ್ ಮ್ಯಾನ್ ಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 1860 (U/s 143, 147, 148, 323, 324, 379, 504, 506), ಅಟ್ರಾಸಿಟಿ ಕೇಸ್, ಐಪಿಸಿ ಸೆಕ್ಷನ್ 1989 (u/s-3(1), (r)(s), 3(2)(v-a), IPC 1860(u/s-149 ರಡಿ ಪ್ರಕರಣ ದಾಖಲಿಸಲಾಗಿದೆ. ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ, ಆಪ್ತ ಸುಜಿತ್ ಜಾಧವ್, ಸದ್ದಾಂ, ಚನ್ನರಾಜ ಹಟ್ಟಿಹೊಳಿಯ ಇಬ್ಬರು ಗನ್ ಮ್ಯಾನ್ ಗಳ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಪೃಥ್ವಿ ಸಿಂಗ್ ಪುತ್ರ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು ಮಾಡಲಾಗಿದೆ.