ಹಲ್ಲೆ ಪ್ರಕರಣ: ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ಸಹೋದರನ ವಿರುದ್ಧ ಎಫ್​​ಐಆರ್

Prasthutha|

ಬಾಗಲಕೋಟೆ : ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಮಾಜಿ ಸಚಿವ ಮುರುಗೇಶ್ ನಿರಾಣಿ ಮತ್ತು ಅವರ ಸಹೋದರ ಸಂಗಮೇಶ್ ನಿರಾಣಿ ವಿರುದ್ಧ ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

- Advertisement -

ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಿನ್ನೆ ಬೆಳಗ್ಗೆ ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲೆ ಇಂಗಳಗಿ ಕ್ರಾಸ್ ಬಳಿ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿತ್ತು. ಸಾಮಾಜಿಕ ಕಾರ್ಯಕರ್ತ ಹನುಮಂತ ಶಿಂಧೆ ಜೊತೆ ಕಾರಿನಲ್ಲಿ ತೆರಳುತ್ತಿದ್ದಾಗ ಯಲ್ಲಪ್ಪ ಮೇಲೆ ಹಲ್ಲೆ ನಡೆಸಿದ್ದು, ನಿರಾಣಿ ಸಹೋದರರ ಆರು ಗೂಂಡಾಗಳು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

- Advertisement -

ಘಟನೆಯಲ್ಲಿ ಯಲ್ಲಪ್ಪ ಹೆಗಡೆ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಹನುಮಂತ ಶಿಂಧೆ ನೀಡಿದ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

“ನಾನು, ಯಲ್ಲಪ್ಪ ಹೆಗಡೆ, ಡ್ರೈವರ್, ಇನ್ನಿಬ್ಬರು ಬೀಳಗಿಯಲ್ಲಿ ಭಿಕ್ಷಾಟನೆ ಕಾರ್ಯಕ್ರಮಕ್ಕೆ ಹೊರಟಿದ್ದೆವು. ಇಂಗಳಗಿ ರಸ್ತೆ ಬೈಪಾಸ್ ರೋಡ್ ಹತ್ತಿರ ಮುರುಗೇಶ್ ರುದ್ರಪ್ಪ ನಿರಾಣಿ, ಸಂಗಮೇಶ್ ರುದ್ರಪ್ಪ ನಿರಾಣಿ ಇವರು ಆರು ಜನ ಮುಖವಾಡ ಧರಿಸಿರುವ ಗೂಂಡಾಗಳನ್ನು ಬೊಲೆರೊ ಗಾಡಿಯಲ್ಲಿ ಕಳಿಸಿ ನಮ್ಮ ಮೇಲೆ ಮಾರಣಾಂತಿಕ ಹಲ್ಲೆ ಮಾಡಿಸಿರುತ್ತಾರೆ” ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Join Whatsapp