Home ಟಾಪ್ ಸುದ್ದಿಗಳು ನೀತಿ ಸಂಹಿತೆ ಉಲ್ಲಂಘನೆ: ಜನಾರ್ದನ ರೆಡ್ಡಿ ಸೇರಿ ನಾಲ್ಕು ಮಂದಿಯ ವಿರುದ್ದ ಎಫ್’ಐಆರ್

ನೀತಿ ಸಂಹಿತೆ ಉಲ್ಲಂಘನೆ: ಜನಾರ್ದನ ರೆಡ್ಡಿ ಸೇರಿ ನಾಲ್ಕು ಮಂದಿಯ ವಿರುದ್ದ ಎಫ್’ಐಆರ್

ಕನಕಗಿರಿ: ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಸೇರಿ ಐದು ಮಂದಿಯ ವಿರುದ್ಧ ಎಫ್’ಐಆರ್ ದಾಖಲಾಗಿದೆ.


ಕನಕಗಿರಿ ಕ್ಷೇತ್ರದ ಪಕ್ಷದ ನಿಯೋಜಿತ ಅಭ್ಯರ್ಥಿ ವೆಂಕಟರಮಣ ದಾಸರಿ, ಆಂಬುಲೆನ್ಸ್ ವಾಹನದ ಮಾಲೀಕ ಜಿ. ನವೀನಕುಮಾರ, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಿ ಅರುಣಾ ಮತ್ತು ಆಂಬುಲೆನ್ಸ್ ಚಾಲಕನ ವಿರುದ್ಧ ಎಫ್’ಐಆರ್ ದಾಖಲಾಗಿದೆ.


ನೀತಿಸಂಹಿತೆ ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಸಾರ್ವಜನಿಕರ ಬಳಕೆಗೆ ನೀಡಲಾಗಿದ್ದ ಆಂಬುಲೆನ್ಸ್ ಅನ್ನು ಅಧಿಕಾರಿಗಳು ಕನಕಗಿರಿಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ರಾತ್ರಿ ವಶಪಡಿಸಿಕೊಂಡಿದ್ದರು.

Join Whatsapp
Exit mobile version