Home ಟಾಪ್ ಸುದ್ದಿಗಳು ಸುಳ್ಳು ಮಾಹಿತಿ ಹರಡಿದ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್

ಸುಳ್ಳು ಮಾಹಿತಿ ಹರಡಿದ ಆರೋಪ: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಎಫ್​ಐಆರ್

ಹಾವೇರಿ: ರೈತರೊಬ್ಬರ ಆತ್ಮಹತ್ಯೆ ವಿಚಾರವಾಗಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಲಾಗಿದೆ.

ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

ಕರ್ನಾಟಕದಲ್ಲಿ ವಕ್ಫ್ ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲೇ, ಹಾವೇರಿಯಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರಿಗೆ ವಕ್ಫ್ ನೋಟಿಸ್ ಬಂದಿದ್ದೇ ಆತ್ಮಹತ್ಯೆಗೆ ಕಾರಣ ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಹರನಗೇರಿ ರೈತ‌ ರುದ್ರಪ್ಪ ಆತ್ಮಹತ್ಯೆ ಬಗ್ಗೆ ಟ್ವೀಟ್​ ಮಾಡಿದ್ದ ತೇಜಸ್ವಿ ಸೂರ್ಯ, ವಕ್ಫ್​​ ನೋಟಿಸ್​ಗೆ ಹೆದರಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದಿದ್ದರು.

ತೇಜಸ್ವಿ ಸೂರ್ಯ ಟ್ವೀಟ್​​ನಲ್ಲೇನಿತ್ತು?
ಪಹಣಿಯಲ್ಲಿ ವಕ್ಫ್ ಹೆಸರು ನಮೂದಾಗಿದ್ದರಿಂದ ರೈತ‌ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮ ವರದಿಯೊಂದನ್ನು ಟ್ವೀಟ್ ಮಾಡಿದ್ದ ತೇಜಸ್ವಿ ಸೂರ್ಯ, ‘ಸಿಎಂ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಅವರ ಅಲ್ಪಸಂಖ್ಯಾತರ ತುಷ್ಟೀಕರಣದಿಂದ ಕರ್ನಾಟಕದಲ್ಲಿ ದುರಂತಗಳು ಸಂಭವಿಸುತ್ತಿವೆ. ಪ್ರತಿ ದಿನ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ಉಲ್ಲೇಖಿಸಿದ್ದರು. ಇದೀಗ ಈ ಟ್ವೀಟ್​ ಅನ್ನು ಅಳಿಸಿಹಾಕಲಾಗಿದೆ.

Join Whatsapp
Exit mobile version