ಪ್ರಿಯಾಂಕಾ ಗಾಂಧಿ ವಿರುದ್ಧ FIR : ಅಧಿಕೃತವಾಗಿ ಬಂಧಿಸಿದ್ದೇವೆಂದ ಉತ್ತರ ಪ್ರದೇಶ ಪೊಲೀಸರು

Prasthutha|

ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನು ಗೃಹ ಬಂಧನದಲ್ಲಿಟ್ಟಿದ್ದ ಉತ್ತರ ಪ್ರದೇಶ ಪೊಲೀಸರು ಮಂಗಳವಾರ ಐಪಿಸಿ ಸೆಕ್ಷನ್ 144 ಹಾಗೂ ಇತರ ಸೆಕ್ಷನ್ ಉಲ್ಲಂಘಿಸಿದ ಆರೋಪದಲ್ಲಿ ಅಧಿಕೃತವಾಗಿ ಬಂಧಿಸಿದ್ದಾರೆ.
ಉತ್ತರ ಪ್ರದೇಶ ಲಖಿಂಪುರ ಖೇರಿಯಲ್ಲಿ ವಾಹನ ಹರಿಸಿ ರೈತರನ್ನು ಹತ್ಯೆ ಮಾಡಿದ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ನೀಡಲು ತೆರಳುತ್ತಿದ್ದ ಪ್ರಿಯಾಂಕಾ ಗಾಂಧಿಯನ್ನು ಮಾರ್ಗ ಮಧ್ಯೆ ಉತ್ತರ ಪ್ರದೇಶ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದರು.
ಶಾಂತಿ ಕದಡಿದ ಆರೋಪ ಸೇರಿದಂತೆ ವಿವಿಧ ಕಲಂಗಳಡಿ ಪ್ರಿಯಾಂಕಾ ಗಾಂಧಿ ವಾದ್ರಾ, ದೀಪೇಂದ್ರ ಹೂಡಾ ಮತ್ತು ಅಜಯ್ ಕುಮಾರ್ ಲಲ್ಲು ಸೇರಿದಂತೆ 11 ಜನರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಹರ್ಗಾಂವ್ ಪೊಲೀಸ್ ಠಾಣೆಯ ವಿಶೇಷ ಅಧಿಕಾರಿ ತಿಳಿಸಿದ್ದಾರೆ.

Join Whatsapp