Home ಟಾಪ್ ಸುದ್ದಿಗಳು ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ FIR: ಹಿಮಂತ ಬಿಸ್ವ ಶರ್ಮ

ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ FIR: ಹಿಮಂತ ಬಿಸ್ವ ಶರ್ಮ

ಗುವಾಹಟಿ: ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ನ ಇತರ ನಾಯಕರ ವಿರುದ್ಧ ಅಸ್ಸಾಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ.


‘ಕಾಂಗ್ರೆಸ್ ಕಾರ್ಯಕರ್ತರು ಹಿಂಸಾಚಾರ, ಸಾರ್ವಜನಿಕ ಆಸ್ತಿಗೆ ಹಾನಿ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಯಂತಹ ಕೃತ್ಯ ಎಸಗಿದ್ದಾರೆ. ಅವರಿಗೆ ಪ್ರಚೋದನೆ ನೀಡಿದ ಆರೋಪದಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ಕನ್ನಯ್ಯ ಕುಮಾರ್ ಮತ್ತು ಇತರ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ’ ಎಂದು ಅವರು ‘ಎಕ್ಸ್’ನಲ್ಲಿ ಬರೆದಿದ್ದಾರೆ.

Join Whatsapp
Exit mobile version