FIR ಆಗಿ 13 ದಿನಗಳಾದರೂ ರಾಜಕುಮಾರ ಟಾಕಳೆ ಬಂಧನವಾಗಿಲ್ಲ ಏಕೆ: ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ

Prasthutha|

- Advertisement -

ಬೆಳಗಾವಿ: ವಿವಿಧ ಆರೋಪಗಳಡಿ ದಾಖಲಾದ ಪ್ರಕರಣಗಳಲ್ಲಿ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ್ ‌ಟಾಕಳೆ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ಈಗಾಗಲೇ ತಿರಸ್ಕರಿಸಿದೆ. ಆದರೆ, ಆರೋಪಿ ವಿರುದ್ಧ ಎಫ್ಐಆರ್ ಆಗಿ 13 ದಿನಗಳು ಕಳೆದರೂ ಪೊಲೀಸರು ಈವರೆಗೂ ಬಂಧಿಸಿಲ್ಲ ಎಂದು ಕಾಂಗ್ರೆಸ್ ಯುವ ಕಾರ್ಯಕರ್ತೆ ನವ್ಯಶ್ರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ‌.

ಬೆಳಗಾವಿಯ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜಕುಮಾರ ಟಾಕಳೆ ಜಾಮೀನು ಅರ್ಜಿ ವಜಾ ಮಾಡಿದ ಕೋರ್ಟ್​ ತೀರ್ಪಿನ ಬಗ್ಗೆ ಸಂತಸವಾಗಿದೆ. ನನಗೆ ಆದ ಅನ್ಯಾಯದ ಬಗ್ಗೆ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಿಸಿದ್ದೆ‌. ಎಫ್‌ ಐಆರ್ ಆಗಿ 13 ದಿನಗಳಾದರೂ ರಾಜಕುಮಾರ ಟಾಕಳೆ ಬಂಧನವಾಗಿಲ್ಲ. ನಾನು ಹೆದರಿ ಓಡುವವಳಲ್ಲ ಎಂದರು.

- Advertisement -

ಈ ವಿಚಾರಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ. ನನ್ನ ಮಾನಹಾನಿಯಾಗಿದೆ, ಅನ್ಯಾಯ ಆಗಿದೆ ಹೀಗಾಗಿ ನಾನು ಹೋರಾಟ ಮಾಡುತ್ತಿದ್ದೇನೆ. ನಾನು ಕೇಸ್ ದಾಖಲಿಸಿದ ಬಳಿಕ ಆತನನ್ನ ಕರೆದು ವಿಚಾರಣೆ ಮಾಡಬೇಕಿತ್ತು. ಆದರೆ ಆತ ತಲೆ ಮರೆಸಿಕೊಂಡಿದ್ದಾನೆ. ಯಾರ ಒತ್ತಡಕ್ಕೂ ಮಣಿಯದೆ ಪೊಲೀಸ್ ಇಲಾಖೆ ನ್ಯಾಯ ಕೊಡಿಸಬೇಕು. ಮತ್ತಷ್ಟು ಹೆಣ್ಣುಮಕ್ಕಳ ವೀಡಿಯೋ ಹೊರಗೆ ಬರಬಾರದು ಎಂದಾದರೆ ಅವನ ಬಂಧನವಾಗಬೇಕು ಎಂದು ಆಗ್ರಹಿಸಿದರು.

Join Whatsapp