Home ಟಾಪ್ ಸುದ್ದಿಗಳು ರಾಷ್ಟ್ರ ಧ್ವಜಕ್ಕೆ ಅವಮಾನವಾಗುವ ಪೋಸ್ಟ್: ಶಕುಂತಲಾ ವಿರುದ್ಧ FIR

ರಾಷ್ಟ್ರ ಧ್ವಜಕ್ಕೆ ಅವಮಾನವಾಗುವ ಪೋಸ್ಟ್: ಶಕುಂತಲಾ ವಿರುದ್ಧ FIR

ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಭಾರತದ ರಾಷ್ಟ್ರ ಧ್ವಜಕ್ಕೆ ಅವಮಾನವಾಗುವ ರೀತಿಯಲ್ಲಿ ಸುಳ್ಳು ಪೋಸ್ಟ್ ಹಾಕಿದ ತುಮಕೂರು ಮೂಲದ ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ನಟರಾಜ್ ಎಂಬಾಕೆಯ ವಿರುದ್ಧ ಎಫ್ ಐಆರ್ ದಾಖಲಾಗಿದೆ.


ಜನರ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡಿದ್ದಾರೆ ಎಂದು ಐಪಿಸಿ 153 (ಬಿ) ಅಡಿಯಲ್ಲಿ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಹೇಳಿಕೆ ಆರೋಪದ ಮೇಲೆ ಶಕುಂತಲಾ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿತ್ತು.


ಟ್ವಿಟ್ಟರ್ ಎಕ್ಸ್ನಲ್ಲಿ ಶಕುಂತಲಾ ನಟರಾಜ್ ಸುಳ್ಳು ಪೋಸ್ಟ್ ಹಾಕಿದ್ದು, ಲುಲು ಶಾಪಿಂಗ್ ಮಾಲ್ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನ ಬಾವುಟ ಹಾರಿಸಿದ್ದಾರೆ ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ಶಕುಂತಲಾ ಪೋಸ್ಟ್ ಹಂಚಿಕೊಂಡಿದ್ದಳು.

Join Whatsapp
Exit mobile version