ವ್ಯಕ್ತಿಯ ಮೇಲೆ ಮೂತ್ರ ಮಾಡಿದ್ದು RSS ಕಾರ್ಯಕರ್ತ ಎಂದ ಗಾಯಕಿ ವಿರುದ್ಧ FIR

Prasthutha|

ಭೋಪಾಲ್: ದಲಿತನ ಮೇಲೆ ವ್ಯಕ್ತಿಯೊಬ್ಬರ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ ಸಂಬಂಧ ಟ್ವೀಟ್ ಮಾಡಿರುವ ಭೋಜ್ಪುರಿ ಗಾಯಕಿ ನೇಹಾ ಸಿಂಗ್ ರಾಥೋಡ್ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

- Advertisement -


ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಾಯಕಿ ಟ್ವೀಟ್ ಮಾಡಿದ್ದು, ಆರ್ ಎಸ್ ಎಸ್ ಕಾರ್ಯಕರ್ತ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಭೋಪಾಲ್ ನ ಹಬೀಬ್ಗಂಜ್ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ನೇಹಾ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ನೇಹಾ ಸಿಂಗ್ ಎಂಬ ಹೆಸರಿನ ಟ್ವಿಟ್ಟರ್ ಖಾತೆಯ ವಿರುದ್ಧ ಸೂರಜ್ ಎಂಬವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.



Join Whatsapp