ಮುಸ್ಲಿಮರ ಜನಸಂಖ್ಯೆ ತೋರಿಸಲು ಪಾಕ್ ಧ್ವಜ ಬಳಕೆ: ಸುವರ್ಣ ನ್ಯೂಸ್, ಅಜಿತ್ ಹನುಮಕ್ಕನವರ್ ವಿರುದ್ಧ FIR

Prasthutha|

ಬೆಂಗಳೂರು: ಸುದ್ದಿ ಬಿತ್ತರಿಸುವಾಗ ಹಿಂದೂಗಳ ಜನಸಂಖ್ಯೆ ತಿಳಿಸಲು ತ್ರಿವರ್ಣ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನದ ಧ್ವಜ ಬಳಕೆ ಮಾಡಿರುವ ಸುವರ್ಣ ನ್ಯೂಸ್ ಹಾಗೂ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

- Advertisement -


ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತರಾಗಿರುವ ತನ್ವೀರ್ ಅಹ್ಮದ್ ನೀಡಿದ್ದ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಐಪಿಸಿ 1860ರ ಅಡಿಯಲ್ಲಿನ 505(2) ಸೆಕ್ಷನ್ ಗಳ ಅಡಿಯಲ್ಲಿ ದ್ವೇಷವನ್ನು ಸೃಷ್ಟಿಸಿದ ಅಥವಾ ಉತ್ತೇಜಿಸಲು ಯತ್ನಿಸಿರುವ ಬಗ್ಗೆ ಎಫ್ ಐಆರ್ ದಾಖಲಿಸಿದ್ದಾರೆ. ಮೇ 9ರ ರಾತ್ರಿ 8.30ಕ್ಕೆ ಪ್ರಸಾರಗೊಂಡಿರುವ ಈ ಕಾರ್ಯಕ್ರಮವನ್ನು ಸುವರ್ಣ ನ್ಯೂಸ್ನ ಅಜಿತ್ ಹನುಮಕ್ಕನವರ್ ನಿರೂಪಿಸುತ್ತಿದ್ದರು. ಈ ಕಾರ್ಯಕ್ರಮದಲ್ಲಿ ಹಿಂದೂಗಳ ಜನಸಂಖ್ಯೆ ತಿಳಿಸಲು ಭಾರತದ ಧ್ವಜ, ಮುಸ್ಲಿಮರ ಜನ ಸಂಖ್ಯೆಯನ್ನು ತಿಳಿಸಲು ಪಾಕಿಸ್ತಾನದ ಧ್ವಜ ಬಳಸಿರುವುದು ಕಂಡುಬಂದಿದೆ.

- Advertisement -


ಇದರ ವಿಡಿಯೋವನ್ನು ಆಲ್ಟ್‌ ನ್ಯೂಸ್‌ ನ ಸಹ ಸಂಸ್ಥಾಪಕ ಹಾಗೂ ಪತ್ರಕರ್ತ ಮುಹಮ್ಮದ್ ಝುಬೇರ್ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.


“ಇದು ಉದ್ದೇಶಪೂರ್ವಕವಾಗಿ ಆದ ತಪ್ಪಲ್ಲ. ಆಕಸ್ಮಿಕವಾಗಿ ಈ ತಪ್ಪು ಜರುಗಿದೆ. ತಪ್ಪು ಗೊತ್ತಾದ ಕೂಡಲೇ ಗ್ರಾಫಿಕ್ಸ್ ಬದಲಾಯಿಸಲಾಗಿದೆ. ಈ ಅಚಾತುರ್ಯಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇವೆ” ಸುವರ್ಣ ನ್ಯೂಸ್ ವಿಷಾದ ವ್ಯಕ್ತಪಡಿಸಿತ್ತು



Join Whatsapp