Home ಟಾಪ್ ಸುದ್ದಿಗಳು ಕಡಿಮೆ ಅಂಕ ಪಡೆದ ವಿದ್ಯಾರ್ಥಿ ಮೇಲೆ ಹಲ್ಲೆ: ಶಿಕ್ಷಕನ ವಿರುದ್ಧ FIR

ಕಡಿಮೆ ಅಂಕ ಪಡೆದ ವಿದ್ಯಾರ್ಥಿ ಮೇಲೆ ಹಲ್ಲೆ: ಶಿಕ್ಷಕನ ವಿರುದ್ಧ FIR

ಯಾದಗಿರಿ: ಗಣಿತ ವಿಷಯದಲ್ಲಿ ಕಡಿಮೆ ಅಂಕ ಪಡೆದಿದ್ದಾನೆ ಎಂದು ಶಿಕ್ಷಕ ವಿದ್ಯಾರ್ಥಿಗೆ ಮನಸ್ಸೋ ಇಚ್ಛೆ ಥಳಿಸಿದ ಘಟನೆ ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ.


ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಯುವರಾಜ ಎಂಬ ಬಾಲಕ ಗಣಿತದಲ್ಲಿ ಕಡಿಮೆ ಅಂಕ ಪಡೆದ ಎಂಬ ಕಾರಣಕ್ಕೆ ಶಿಕ್ಷಕ ಡೆಲ್ವೀಲ್ ಮನ ಬಂದಂತೆ ಥಳಿಸಿದ್ದಾನೆ. ಆಗಸ್ಟ್ 19 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.


ಚಡಿ ಏಟಿನಿಂದ ಬಾಲಕನ ಬೆನ್ನಿನ ಮೇಲೆ ಬಾಸುಂಡೆ ಬರುವ ಹಾಗೆ ಬಾರಿಸಿದ್ದಾನೆ. ಸದ್ಯ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು ಶಿಕ್ಷಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.

Join Whatsapp
Exit mobile version