ಜೈಲಿನಿಂದ ಬಿಡುಗಡೆಯಾದ ಸಬ್ ಇನ್ಸ್ ಪೆಕ್ಟರ್ ಗೆ ಸ್ವಾಗತ ಕೋರಿದವರ ವಿರುದ್ಧ FIR

Prasthutha: January 14, 2022

ವಿಜಯನಗರ: ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದು ಜೈಲು ಸೇರಿದ್ದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಜೈಲಿನಿಂದ ಬಿಡುಗಡೆಗೊಳ್ಳುವಾಗ ಭವ್ಯ ಸ್ವಾಗತ ಕೋರಿದ್ದವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಜಾಮೀನಿನ ಮೇಲೆ ಹೊರಬಂದ ಪಿಎಸ್ ಐ ನಾಗಪ್ಪ ಅವರಿಗೆ ಕುಮಾರಪ್ಪ, ಮಧುನಾಯ್ಕ್, ಶಿವರಾಜ್, ಶಿವಕುಮಾರ್, ಅಂಬರೀಶ್, ಚಂದ್ರು, ಯರಿಸ್ವಾಮಿ, ಸುರೇಶ, ಮಂಜಪ್ಪ, ತಿಮ್ಮಣ್ಣ, ಪಂಪಣ್ಣ, ನಾಗೇಶ ಸ್ವಾಗತ ಕೋರಿದ್ದರು. ಇವರ ವಿರುದ್ಧ ಐಪಿಸಿ ಸೆಕ್ಷನ್ 143, 188, 268, 269ರಡಿ ಪ್ರಕರಣ ದಾಖಲಾಗಿದೆ.

ವಿಜಯನಗರ ಜಿಲ್ಲೆ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ 2.50 ಲಕ್ಷ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ನಾಗಪ್ಪ ಅವರನ್ನು ಬಂಧಿಸಿದ್ದರು. ನಂತರ ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಅದ್ಧೂರಿ ಮೆರವಣಿಗೆ ಮಾಡಿ, ಪಟಾಕಿ ಸಿಡಿಸಿ ಪಿಎಸ್ ಐ ನಾಗಪ್ಪಗೆ ಬೆಂಬಲಿಗರು ಸ್ವಾಗತ ಕೋರಿದ್ದರು.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!