Home ಟಾಪ್ ಸುದ್ದಿಗಳು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿ 11 ಮಂದಿ ವಿರುದ್ಧ FIR

ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿ 11 ಮಂದಿ ವಿರುದ್ಧ FIR

ಉಡುಪಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ ಅವರ ಪ್ರತಿಕೃತಿಗೆ ಚಪ್ಪಲಿ ಏಟು ಹಾಗೂ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿ 11 ಮಂದಿ ಬಿಜೆಪಿ ಮುಖಂಡರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.


ಪ್ರಾಂಶುಪಾಲರಿಗೆ ಪ್ರಶಸ್ತಿ ವಾಪಸ್ ಪಡೆದ ವಿಚಾರವಾಗಿ ಮಣಿಪಾಲದ ಸಿಂಡಿಕೇಟ್ ಸರ್ಕಲ್ ನಲ್ಲಿ ಸೆ.6ರಂದು ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ಹೆದ್ದಾರಿ ತಡೆದು ಬಿಜೆಪಿ ಮುಖಂಡರು ಸಿಎಂ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದರು. ಅಲ್ಲದೇ ಹಿಂದೂ ವಿರೋಧಿ ಸಿದ್ದರಾಮಯ್ಯ ತೊಲಗಿಸಿ ಎಂದು ಘೋಷಣೆ ಕೂಡ ಕೂಗಿದ್ದರು.


ಈ ಸಂದರ್ಭ ನಗರಸಭಾ ಸದಸ್ಯ ಗಿರೀಶ್ ಅಂಚನ್, ಯುವ ಮೋರ್ಚಾ ಮುಖಂಡ ಪೃಥ್ವಿರಾಜ್ ಶೆಟ್ಟಿ ಸಿಎಂ ಪ್ರತಿಕೃತಿಗೆ ಚಪ್ಪಲಿಯಿಂದ ಹೊಡೆದಿದ್ದರು. ಈ ಕುರಿತು ಎನ್ ಎಸ್ ಯುಐ ಮುಖಂಡ ಸೌರಭ್ ಬಲ್ಲಾಳ್ ಶಾಂತಿಭಂಗ ತರುವ ಉದ್ದೇಶದಿಂದ ಕೃತ್ಯ ಎಸೆಗಿದ್ದಾರೆ ಎಂದು ದೂರು ನೀಡಿದ್ದಾರೆ.


ಈ ಪ್ರಕರಣದಲ್ಲಿ ಯಶ್ ಪಾಲ್ ಸುವರ್ಣ ಎ5 ಆರೋಪಿಯಾಗಿದ್ದಾರೆ. ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ಗಿರೀಶ್ ಅಂಚನ್, ವಿಜಯ ಕೊಡವೂರು, ಬಾಲಕೃಷ್ಣ ಶೆಟ್ಟಿ ವಿರುದ್ಧವೂ ದೂರು ನೀಡಲಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version