ಬೆಂಗಳೂರು: ವಿಶೇಷ ತನಿಖಾ ತಂಡದಲ್ಲಿರುವ ಎಡಿಜಿಪಿ ಚಂದ್ರಶೇಖರ್ ಗೆ ಬೆದರಿಕೆ ಆರೋಪದ ಹಿನ್ನೆಲೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಸಂಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಬೆದರಿಕೆ ಹಾಕಿದ್ದಾರೆಂದು ಸುಳ್ಳು ಆರೋಪ ಮಾಡಿರುವ ಹಿನ್ನೆಲೆ, ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಅವರ ಅಪ್ತ ಸುರೇಶ್ ಬಾಬು ಮೇಲೆ ದೂರು ದಾಖಲಾಗಿತ್ತು.
ಪತ್ರಿಕಾಗೋಷ್ಠಿ ನಡೆಸಿ ಸುಳ್ಳು ಆರೋಪ ಮಾಡಿರುವುದಾಗಿ ದೂರು ನೀಡಲಾಗಿತ್ತು. ಎಸ್ ಐಟಿಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹೆಚ್ಚಿನ ಸಾಕ್ಷ್ಯಾಧಾರ ಕಲೆ ಹಾಕಲಾಗುತ್ತಿದೆ. ಸಾಕ್ಷ್ಯಾಧಾರ ಇರುವ ಹಿನ್ನೆಲೆ ರಾಜ್ಯಾಪಾಲರ ಅನುಮತಿ ಕೋರಿ ಪತ್ರ ಬರೆಯಲಾಗಿತ್ತು.
ಇದೇ ವಿಚಾರವಾಗಿ ಸುಳ್ಳು ಆರೋಪ ಮಾಡಿ ಬೆದರಿಕೆ ಹಾಕಿರುವುದಾಗಿ ದೂರು ನೀಡಲಾಗಿತ್ತು. ದೂರಿನ ಹಿನ್ನೆಲೆ ಹೆಚ್ ಡಿಕೆ, ನಿಖಿಲ್ ಹಾಗೂ ಆಪ್ತ ಸುರೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಪೊಲೀಸರು ಎನ್ ಸಿಆರ್ ದಾಖಲಿಸಿದ್ದರು.