ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ FIR

Prasthutha|

ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್​ ಐಆರ್ ದಾಖಲಾಗಿದೆ.

- Advertisement -

ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಪಬ್​​ ಮೇಲೆ ಕಬ್ಬನ್​ ಪಾರ್ಕ್​ ಠಾಣೆಯಲ್ಲಿ FIR ದಾಖಲಾಗಿದೆ.

ಸರ್ಕಾರ ನಿಗದಿಪಡಿಸಿರುವ ನಿಯಮವನ್ನು ಗಾಳಿಗೆ ತೂರಿ ತಡರಾತ್ರಿ ವರೆಗೂ ಪಬ್ ತೆರೆದು ಪಾರ್ಟಿಗೆ ಅನುವು ಮಾಡಿಕೊಟ್ಟ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜು.6ರ ರಾತ್ರಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ, ರಾತ್ರಿ 1.20ರವರೆಗೂ ಪಬ್ ಓಪನ್ ಮಾಡಿದ್ದ ಆರೋಪದಡಿ ನಗರದ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್, ಚರ್ಚ್ ಸ್ಟ್ರೀಟ್‌ನಲ್ಲಿರುವ ಎಂಪೈರ್ ರೆಸ್ಟೋರೆಂಟ್, ಬ್ರಿಗೇಡ್ ರಸ್ತೆಯಲ್ಲಿರುವ ಪಾಂಜಿಯೋ ಬಾರ್ ಆ್ಯಂಡ್ ರೆಸ್ಟೋರೆಂಟ್ ವ್ಯವಸ್ಥಾಪಕರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Join Whatsapp