ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಎಫ್.ಐ.ಆರ್ ಪ್ರತಿ, ಪೊಲೀಸರ ತನಿಖಾ ವರದಿ ಹಾಗೂ ಇನ್ನಿತರ ದಾಖಲೆಗಳನ್ನು ಪಡೆಯಬಹುದೆಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ನ್ಯಾಯಮೂರ್ತಿ ಎನ್.ಎಸ್. ಸಂಜಯ ಗೌಡ ಅವರ ಏಕಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ.
ಮಲ್ಲೇಶಪ್ಪ ಮತ್ತು ಸಿಬಿಐ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ತನಿಖಾ ವರದಿಯನ್ನು ಸಲ್ಲಿಸುವಂತೆ ರಾಜ್ಯ ಮಾಹಿತಿ ಹಕ್ಕು ಆಯೋಗ ನೀಡಿದ ಆದೇಶವನ್ನು ಪ್ರಶ್ನಿಸಿ ಸಿಐಡಿ, ಮಾಹಿತಿ ಹಕ್ಕು ಅಧಿಕಾರಿ ಮತ್ತು ಪೊಲೀಸ್ ಮಹಾ ನಿರ್ದೇಶಕರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ನೀಡಿದೆ.
ಈ ಆದೇಶದನ್ವಯ ಯಾವುದೇ ನಾಗರಿಕರಿಗೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಪೊಲೀಸರ ತನಿಖಾ ವರದಿ, ಎಫ್.ಐ.ಆರ್ ಪ್ರತಿಯನ್ನು ಪಡೆಯುವ ಹಕ್ಕು ಪಡೆಯಬಹುದಾಗಿದೆ.