ಪ್ರಚೋದನಕಾರಿ ಭಾಷಣ| ಶಾಸಕ ಹರೀಶ್ ಪೂಂಜ ವಿರುದ್ಧ FIR ದಾಖಲು

Prasthutha|

ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿರುವ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೋಮು ಪ್ರಚೋದಕ ಹಾಗೂ ದ್ವೇಷ ಹರಡುವ ರೀತಿಯ ಭಾಷಣ ಮಾಡಿದ ಪೂಂಜಾ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತಾ ಕೆ.ಪೂಜಾರಿ ದೂರು ನೀಡಿದ್ದರು. ನಮಿತಾ ಪೂಜಾರಿ ನೀಡಿದ ದೂರಿನ ಆಧಾರದಲ್ಲಿ ಐಪಿಸಿ ಸೆಕ್ಷನ್ 153, 153A, 505 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ‌

- Advertisement -

ಇತ್ತೀಚೆಗೆ ಬೆಳ್ತಂಗಡಿಯಲ್ಲಿ ನಡೆದ ಬಿಜೆಪಿ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಹರೀಶ್ ಪೂಂಜ, 24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ತುಳು ಭಾಷೆಯಲ್ಲಿ‌ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಭಾಷಣದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದ ಹಿಂದುತ್ವ ಸಂಘಟನೆಗಳ ನಾಯಕರ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದರು.

ಸತ್ಯಜಿತ್ ಸುರತ್ಕಲ್ ಅವರನ್ನು ಉದ್ದೇಶಿಸಿ, ನೀವು ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದೀರಿ. 24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರಾ.. ಬಜರಂಗದಳ ಬ್ಯಾನ್ ಮಾಡುತ್ತೇವೆ  ಎಂದ ಕಾಂಗ್ರೆಸ್ ಪರ  ವೋಟ್ ಕೇಳಿದ್ದೀರಾ.. ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಕ್ಷೇತ್ರದ ಜನ ಕೇಳುತ್ತಿದ್ದಾರೆ ಎಂದು ಶಾಸಕ ಪೂಂಜ ಹೇಳಿರುವ ವಿಡಿಯೋ ವೈರಲ್ ಆಗಿತ್ತು.

- Advertisement -